HomeFresh Newsಬಾಲಕಿಯ ಮೇಲೆ ಅ*ತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯ ಮೇಲೆ ಅ*ತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ, ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವಿ ಯಾನೆ ರವೀಂದ್ರ ಆಚಾರ್ಯ (32) ಎಂಬಾತನಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ರವಿ ಯಾನೆ ರವೀಂದ್ರ ಆಚಾರ್ಯ ವಿರುದ್ಧ ಕಡಬ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಅಂದಿನ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಡಿ. ಮಂಜುನಾಥ್ ಅವರು ಆರೋಪಿ ಪುತ್ತೂರು ನೆಲ್ಯಾಡಿ ನಿವಾಸಿ ರವಿ ರವೀಂದ್ರ ಆಚಾರ್ಯ ಎಂಬಾತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪುತ್ತೂರಿನಲ್ಲಿರುವ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲ ಆರೋಪಿಯ ವಿರುದ್ಧದ ಆರೋಪಿಗಳು ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಒಂದು ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

ಐ.ಪಿ.ಸಿ.ಯ ಸೆಕ್ಷನ್ 506 ರ ಅಡಿಯಲ್ಲಿ ಶಿಕ್ಷಾರ್ಹವಾದ ಅಪರಾಧಕ್ಕಾಗಿ ಒಂದು ವರ್ಷದ ಅವಧಿಗೆ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡವನ್ನು ಪಾವತಿಸಬೇಕು. ವಿಫಲವಾದರೆ, ಒಂದು ವರ್ಷದ ಕಠಿಣ ಜೈಲು ಶಿಕ್ಷೆ. (ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುವಂತೆ) ಅದೇಶಿಸಿರುತ್ತಾರೆ. ಸರಕಾರದ ಪರ ಸರಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments