ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ ಗಂಗಾಧರ್ ಚೇಲಾರ್,ಮೂಡಬಿದ್ರೆ ವಲಯದ ಸಂಚಾಲಕರಾದ ಕುಮಾರ್ ಪೂಜಾರಿ ಹಾಗೂ ಬೋರುಗುಡ್ಡೆ,ಹೊಸ್ಮರ್,ನೆಲ್ಲಿಕಾರು, ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತಿ ಇದ್ದರು.
ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.