ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಕುಟುಂಬ ಭೇಟಿ
ಉಚ್ಚಿಲ:ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರೀಮತಿ ಶ್ರುತಿಯವರು ಕುಟುಂಬ ಸಮೇತ ಇಂದು ಭೇಟಿ ನೀಡಿದರು.
ಸ್ವ ಕುಟುಂಬ ಸಮೇತರಾಗಿ ಬಂದ ಅವರು ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು ಹಾಗೂ ಶ್ರೀ ಕ್ಷೇತ್ರದ ವತಿಯಿಂದ ಶ್ರುತಿಯವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ದಿನೇಶ್ ಎರ್ಮಾಳ್, ಸುಗುಣ ಎಸ್. ಕರ್ಕೇರ, ಲಕ್ಷ್ಮಣ್ ಸುವರ್ಣ ಎರ್ಮಾಳ್ ಮುಂತಾದವರು ಉಪಸ್ಥಿತರಿದ್ದರು.


















