ಮಂಗಳೂರಿನ ರಿಶಲ್ ಬ್ರಿಟ್ನಿ ಫೆರ್ನಾಂಡಿಸಗೆ ಕಿತ್ತೂರ್ ರಾಣಿ ಚೆನ್ನಮ್ಮ ಪ್ರಶಸ್ತಿ

ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದು ಹಾಗೂ ಅನೇಕ ಪತ್ರಿಕೆಗಳಲ್ಲಿ ಪ್ರಶಂಸೆಗೆ ಪಾತ್ರರಾಗಿ ಈಗಾಗಲೇ ಮೂರು ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರು ಸುರತ್ಕಲ್ ನಿವಾಸಿಯಾಗಿದ್ದು ರೋನಾಲ್ಡ್ ಮತ್ತು ನಾನ್ಸಿ ಶಿಕ್ಷಕ ದಂಪತಿಯ ಪುತ್ರಿ. ಪ್ರಸ್ತುತ ಎಸ್ ಡಿ ಎಮ್ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಾರೆ.

ಇವರಿಗೆ ಕರ್ನಾಟಕ ಸರ್ಕಾರದ ವತಿಯಿಂದ ನೀಡುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಲುವಾಗಿ ರವೀಂದ್ರ ಕಲಾಕ್ಷೇತ್ರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿ ಇವರ ಸಾಧನೆಯನ್ನು ಗೌರವಿಸಲಾಗಿದೆ.

ಈ ಕಾರ್ಯ ಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಇತರ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿದರು.