ಕಾಪು: ಗ್ರಾಮೀಣ ಪ್ರದೇಶಗಳ ರಸ್ತೆ ಸಂಪರ್ಕವನ್ನು ಮತ್ತಷ್ಟು ಸುಧಾರಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 60 ಲಕ್ಷ ರೂಪಾಯಿ ವೆಚ್ಚದ ಮೂರು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನ.13ರಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ಅನುದಾನದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.
ಅನುದಾನದ ವಿವರ:
ಕರಂದಾಡಿ ಕಲ್ಲುಗುಡ್ಡೆ ರಸ್ತೆ ಅಭಿವೃದ್ಧಿ – 20 ಲಕ್ಷ ರೂ. ಪಾದೂರು ಗೋಳಿದಡಿ ರಸ್ತೆ ಅಭಿವೃದ್ಧಿ – 20 ಲಕ್ಷ ರೂ. ಚಂದ್ರನಗರ ಮಂಡಗ್ ತೋಟ ರಸ್ತೆ ಅಭಿವೃದ್ಧಿ – 20 ಲಕ್ಷ ರೂ. ಒಟ್ಟು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದ್ದು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೂ ಪೂರಕವಾಗಲಿವೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಸಂದೀಪ್ ರಾವ್, ಶರ್ಮಿಳಾ ಆಚಾರ್ಯ, ಮಾಜಿ ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಮಧುಸುಧನ್ ಸಾಲಿಯಾನ, ಮಾಜಿ ಸದಸ್ಯರಾದ ಜಿತೇಶ್ ಶೆಟ್ಟಿ, ಭಾಸ್ಕರ್, ಜ್ಯೋತಿ, ಶಕ್ತಿ ಕೇಂದ್ರ ಅಧ್ಯಕ್ಷ ಪ್ರಸಾದ್ ಆಚಾರ್ಯ, ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್, ಬೂತ್ ಅಧ್ಯಕ್ಷ ಅವಿನಾಶ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಕಾರ್ಯದರ್ಶಿ ಪ್ರಸಾದ್ ಭಂಡಾರಿ, ಗ್ರಾಮದ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ವೇಗ: 60 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಚಾಲನೆ
RELATED ARTICLES

