ಬಿಗ್ ಬಾಸ್ ಸ್ವರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ
ಮಂಗಳೂರು: ತುಳು ಸಿನಿಮಾ ನಟ, ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಬೆದರಿಕೆ ಬಗ್ಗೆ ರೂಪೇಶ್ ಕುಟುಂಬದ ಸದಸ್ಯರು ಮಂಗಳೂರು ಪೆÇಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬಿಗ್ಬಾಸ್ನಲ್ಲಿ ರೂಪೇಶ್ ಹೇಳಿರುವ ಹೇಳಿಕೆಗಳ ಹಿನ್ನೆಲೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ರೂಪೇಶ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.