ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ಡಾ! ಬಿ ಅರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು.
ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ವಂದನಾ ರೈ ಅವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರಾರ್ಪಣಿ ಮಾಡುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಲಿತ ಚಿಂತಕ, ಸಮಾಜಿಕ ಹೋರಾಟಗಾರ ಶೇಖರ್ ಹೆಜಮಾಡಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಮಾತನಾಡಿ ಅಂಬೇಡ್ಕರ್ ರವರ ಆದರ್ಶ ವನ್ನು ಪ್ರತಿಯೊಬ್ಬರೂ ಕೂಡಾ ಮ್ಯೆಗೊಡಿಗೊಡಿಸಿ ಕೊಂಡು ಸೌಹಾರ್ದಯುತ ಜೀವನ ನಡೆಸ ಬೇಕೆಂದು ಹೇಳಿದರು
ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷೆ ಗೀತಾ ಅರುಣ್ ಅಧ್ಯಕ್ಷತೆ ವಹಿಸಿದರು.ಕಾಪು ತಾ. ಅಂಬೇಡ್ಕರ್ ಯುವ ಸೇನಾ ಗೌ.ಅಧ್ಯಕ್ಷ ಪಿ. ಕೃಷ್ಣ ಬಂಗೇರ , ಕಾಪು ತಾ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುರೇಶ್ ಎರ್ಮಾಳ್ ಕರ್ನಾಟಕ ಮಹಿಳಾ ದಲಿತ ಸಂಘರ್ಷ ಸಮಿತಿ ಸಂಘಟನಾ ಕಾರ್ಯದರ್ಶಿ ವಸಂತಿ ಶಿವಾನಂದ್ , ರೋಟರಿ ಪೂರ್ವ ಅಧ್ಯಕರಾದ ರಮೀಜ್ ಹುಸೇನ್ , ಅಬ್ದುಲ್ ಹಮೀದ್ , ರೋಟರಿ ಸಮುದಾಯದಳ ಅಧ್ಯಕ್ಷೆ ದೀಪಾಶ್ರೀ ಕರ್ಕೇರ ಉಪಸ್ಥಿತರಿದ್ದರು.. ರೋಟರಿ ಅಧ್ಯಕ್ಷೆ ಗೀತಾ ಅರುಣ್ ಸ್ವಾಗತಿಸಿ, ಜ್ಯೋತಿ ಮೆನನ್ ವಂದಿಸಿದರು