ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧ : ಮಲ್ಪೆ ಬೀಚ್‌ನ ಉದ್ದಕ್ಕೂ ಸುರಕ್ಷತಾ ಬಲೆಗಳ ನಿರ್ಮಾಣ

ಉಡುಪಿ : ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಸುರಕ್ಷತಾ ಬೇಲಿಯನ್ನು ಅಳವಡಿಸಲಾಗಿದೆ. ಮುಂಗಾರು ಮಳೆ ಕಡಿಮೆಯಾಗಿದ್ದರೂ, ದೊಡ್ಡ ಅಲೆಗಳು ಸಮುದ್ರದ ತೀರಕ್ಕೆ ಅಪ್ಪಳಿಸುತ್ತಿದ್ದು ಸಮುದ್ರದ ಅಬ್ಬರ ಮುಂದುವರಿದಿದೆ. ಈ ಸಮಯದಲ್ಲಿ ನೀರಿಗೆ ಇಳಿಯುವುದು ಅಪಾಯಕಾರಿ.

ಈ ನಿಟ್ಟಿನಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿಯು ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಬೀಚ್‌ನ ಒಂದು ಕಿಲೋ ಮೀಟರ್ ವ್ಯಾಪ್ತಿಯ ಉದ್ದಕ್ಕೂ ಸುರಕ್ಷತಾ ಬಲೆಗಳನ್ನು ನಿರ್ಮಿಸಿದೆ. ಇದರೊಂದಿಗೆ ಎಚ್ಚರಿಕೆಯ ಸೂಚನೆಯಾಗಿ ಅಲ್ಲಲ್ಲಿ ಕೆಂಪು ಧ್ವಜಗಳನ್ನು ಅಳವಡಿಸಿದೆ. ಈ ಬೇಲಿ ದಾಟಿ ಯಾರು ಕೂಡ ಹೋಗುವಂತಿಲ್ಲ ಎಂಬ ಕಟ್ಟಪ್ಪಣೆ ಹೊರಡಿಸಲಾಗಿದೆ.

ಅದೇ ರೀತಿ ಬೀಚ್‌ನಲ್ಲಿ ಸೂಚನಾ ಫಲಕ ಅಳವಡಿಸಿ, ಎಚ್ಚರಿಕೆ ಸಂದೇಶವನ್ನು ಹಾಕಲಾಗಿದೆ. ಬೀಚ್ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರು, ಸಾರ್ವಜನಿಕರು ಜೂ.1 ರಿಂದ ಸೆ.15ರವರೆಗೆ ಸಮುದ್ರಕ್ಕೆ ಇಳಿಯದಂತೆ ಫಲಕದಲ್ಲಿ ಎಚ್ಚರಿಕೆ ನೀಡಲಾಗಿದೆ.

Related Posts

Leave a Reply

Your email address will not be published.