ಕೊಲ್ಲಹಳ್ಳಿಯಲ್ಲಿ ಸರ್ಕಾರಿ ಕೆರೆ ಮುಚ್ಚಲು ಪ್ರಯತ್ನ : ಪ್ರಭಾವಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆ ಹಾಲೇಬೇಲೂರು ಅಂಡರ್ ಪಾಸ್ ಸಮೀಪ ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಗೌರಿಕೆರೆಯನ್ನು ಅಕ್ರಮವಾಗಿ ಮುಚ್ಚಲು ಪ್ರಯತ್ನಿಸುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ವೆ ನಂ 64ರಲ್ಲಿ ಸುಮಾರು 1ಎಕರೆ 33ಗುಂಟೆ ಸರಕಾರಿ ಕೆರೆಯಿದ್ದು ಸ್ಥಳೀಯ ಕೆಲವು ಪ್ರಭಾವಿ ವ್ಯಕ್ತಿಗಳು ಕೆರೆಯನ್ನು ಆಕ್ರಮವಾಗಿ ಮುಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸ್ಥಳಕ್ಕೆ ಬೇಟಿ ನೀಡಿದ ಸಕಲೇಶಪುರ ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್, ಶಿರಸ್ತೇದಾರ್ ಉಮೇಶ್, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಜೀವನ್, ತಾಲೂಕು ಅಧ್ಯಕ್ಷ ವಿಜಯ್ ಕೌಡಹಳ್ಳಿ, ಕಾನೂನು ಸಲಹೆಗಾರ ಪ್ರದೀಪ್, ಪದಾಧಿಕಾರಿಗಳಾದ ಮಹೇಶ್, ಸಂತು ಮೊದಲಾದವರಿದ್ದರು.

Related Posts

Leave a Reply

Your email address will not be published.