ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ
ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ.
ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಭಾಗಶ: ಜಖಂಗೊಂಡಿದ್ದು ಅಪಘಾತದ ತೀವ್ರತೆಗೆ ಎರಡು ಸುರಕ್ಷತಾ ಬೆಲೂನುಗಳೂ ಓಪನ್ ಆಗಿದ್ದರಿಂದಾಗಿ ಚಾಲಕ ಮತ್ತು ಪ್ರಯಾಣಿಕರು ಪಾರಾಗಿದ್ದಾರೆ.