ಶಿರ್ವ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಹಿಂದೂ ಪ್ರೌಢ ಶಾಲೆ, ಶಿರ್ವ ಇವರ ಸಹಯೋಗದಲ್ಲಿ ಆಯೋಜಿಸಲಾದ ‘ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮ ಶನಿವಾರ ಹಿಂದೂ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮಟ್ಟಾರು ರತ್ನಾಕರ್ ಹೆಗ್ಡೆ, ಆಡಳಿತಾಧಿಕಾರಿ ವೈ. ಭಾಸ್ಕರ್ ಶೆಟ್ಟಿ, ಪ್ರಾಂಶುಪಾಲೆ ಸುಜಾತಾ, ಮುಖ್ಯ ಶಿಕ್ಷಕಿ ವಸಂತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.


