ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಡಬ ವಲಯದ ಪ್ರೌಢಶಾಲಾ ವಿಭಾಗದ ನೋಡೆಲ್ ಅಧಿಕಾರಿಗಳಾದ ಶ್ರೀ ಲೋಕೇಶ್ ಟಿ ಎಸ್ ವಿದ್ಯಾರ್ಥಿಗಳು ಪ್ರತಿನಿತ್ಯ ಒಂದು ಗಂಟೆಯಾದರೂ ಆಟದ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಆ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಇಂಥಹ ಕ್ರೀಡಾಕೂಟದ ಮೂಲಕ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯ ಎಂದು ಉದ್ಘಾಟನಾ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಿಸಿದ ಬ್ಯಾಂಕ್ ಆಫ್ ಬರೋಡ ಕೋಡಿಂಬಾಳ ಶಾಖೆಯ ಕಡಬ ಇದರ ಅಸಿಸ್ಟೆಂಟ್ ಮ್ಯಾನೇಜರ್ ತೋಟ ದಿಲೀಪ್ ಮಾತನಾಡಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ರಾಷ್ಟ್ರಮಟ್ಟದ ಕರಾಟೆ ಪಟುಗಳು, ಕಬಡ್ಡಿ ಆಟಗಾರರು ಹಾಗೂ ಯೋಗಪಟುಗಳು ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ಅತಿಥಿಗಳಾದ ಶ್ರೀ ಅನಂತಕೃಷ್ಣ ಕ್ಯಾಂಪೋ ಲಿಮಿಟೆಡ್ ಪಂಜ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ಶ್ರೀ ಪ್ರಮೋದ್ ರೈ ನಂದುಗುರಿ, ಸರಸ್ವತೀ ಆಂಗ್ಲ ಮಾಧ್ಯಮದ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್, ಆಂಗ್ಲ ಮಾಧ್ಯಮದ ಸಂಚಾಲಕರಾದ ಶ್ರೀ ಅಜಿತ್ ರೈ ಆರ್ತಿಲ, ಆಡಳಿತ ಮಂಡಳಿ ಸದಸ್ಯರಾದ ಶ್ಯಾಮ್‌ಪ್ರಸಾದ್ ರೈ, ಕನ್ನಡ ಮಾಧ್ಯಮದ ಸಂಚಾಲಕರಾದ ಶ್ರೀಮತಿ ಸವಿತಾ ಶಿವಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿಗಳಾದ ಶ್ರೀ ಲಿಂಗಪ್ಪ ಜೆ, ಪೋಷಕರಾದ ಶ್ರೀ ರಾಮಚಂದ್ರ ಕೋಲ್ಪೆ, ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸರಸ್ವತೀ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಾದ ಶಾರ್ವಿ.ರೈ ಹಾಗೂ ಚಾರ್ವಿ. ಪ್ರಾರ್ಥಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಶ್ರೀ ಮಾಧವ ಕೋಲ್ಪೆ ಸ್ವಾಗತಿಸಿ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ಶ್ರೀ ವಸಂತ ಕೆ ವಂದಿಸಿದರು. ಆಂಗ್ಲ ಮಾಧ್ಯಮದ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸತೀಶ್‌ಚಂದ್ರ ಕೆ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಶಿಕ್ಷಕರಾದÀ ಶ್ರೀಮತಿ ಸುಮಂಗಲ ಎ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.