ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯಲಿದ್ದೇವೆ : ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ

ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ.

sathish kumpala

ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮಾತನಾಡಿದ ಅವರು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಎಲ್ಲರೂ ಒಗ್ಗಟ್ಟಿನೊಂದಿಗೆ ದುಡಿಯುವ ಪಣ ತೊಟ್ಟಿದ್ದೇವೆ. ಕುಡಿಯುವ ನೀರಿನ ಸಮಸ್ಯೆಯಿಂದ ಹಿಡಿದು ಅನೇಕ ಸಮಸ್ಯೆಗಳು ಕ್ಷೇತ್ರದ ಜನತೆ ಅನುಭವಿಸುತ್ತಾ ಬಂದಿದ್ದಾರೆ. ಧೋರಣೆ ನೀತಿಯನ್ನು ನಿಲ್ಲಿಸಲು ಬಿಜೆಪಿಯ ಗೆಲುವು ಅನಿವಾರ್ಯ . ಸಂಘದಲ್ಲಿ, ಬಿಜೆಪಿ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ದುಡಿಯುತ್ತಾ ಬಂದಿರುವ ನನಗೆ ಈ ಬಾರಿ ಹೈಕಮಾಂಡ್ ಸೀಟು ನೀಡಿರುವುದು ಸಾಮಾನ್ಯ ಕಾರ್ಯಕರ್ತನಿಗೆ ಸಿಕ್ಕ ಗೌರವ ಎಂದರು.

Related Posts

Leave a Reply

Your email address will not be published.