HomeFresh Newsದೇವಾಡಿಗರ ಸೇವಾ ಸಂಘ ಕಟಪಾಡಿ ವತಿಯಿಂದ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ

ದೇವಾಡಿಗರ ಸೇವಾ ಸಂಘ ಕಟಪಾಡಿ ವತಿಯಿಂದ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ

ಕಟಪಾಡಿ: ದೇವಾಡಿಗರ ಸೇವಾ ಸಂಘ ಕಟಪಾಡಿ ವತಿಯಿಂದ 8ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವು ಎಸ್‌ವಿಎಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಂ. ಪ್ರಭಾಕರ್ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗಗಳಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಿಬಿಎ ವಿಭಾಗದಲ್ಲಿ 4ನೇ ರಾಂಕ್ ಪಡೆದ ವಿದ್ಯಾರ್ಥಿನಿ ಛಾಯಾ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಕಾಪು ಪೊಲೀಸ್ ಠಾಣೆಯ ಎಎಸ್‌ಐ ದಯಾನಂದ ದೇವಾಡಿಗ ದಂಪತಿ, ಕೃಷಿಕರಾದ ರವಿ ಸೇರಿಗಾರ್ ಮಟ್ಟು, ಶಿವರಾಮ್ ಪೊಸರು ಹಾಗೂ ವಾಸು ಸೇರಿಗಾರ್ ಕೋಟೆ ಅವರನ್ನು ಸನ್ಮಾನಿಸಲಾಯಿತು.
ವಿಶ್ವ ದೇವಾಡಿಗರ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ದೇವಾಡಿಗ ಅಂಬಲಪಾಡಿ ಅವರು ಡಿಸೆಂಬರ್ 20ರಂದು ನಡೆಯಲಿರುವ ಕಾರ್ಯಕ್ರಮದ ಕುರಿತು ವಿವರಣೆ ನೀಡಿದರು. ಉಡುಪಿ ದೇವಾಡಿಗರ ಸಂಘದ ಅಧ್ಯಕ್ಷ ರತ್ನಾಕರ್ ಜಿ.ಎಸ್. ಹಾಗೂ ಸಂಘದ ಗೌರವ ಸಲಹೆಗಾರ ತುಳಸಿ ದೇವಾಡಿಗ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಗೌರವ ಸಲಹೆಗಾರ ವಿಟ್ಟಲ ಜೆ. ಸೇರಿಗಾರ್, ಉಪಾಧ್ಯಕ್ಷ ಸುಂದರ ಶೇರಿಗಾರ್ ಹಾಗೂ ಸುರೇಶ್ ಕೊಡವೂರು ಉಪಸ್ಥಿತರಿದ್ದರು.
ಮನೋಹರ್ ದೇವಾಡಿಗ ಸ್ವಾಗತಿಸಿ, ನಿತಿನ್ ವಿ. ಸೇರಿಗಾರ್ ವರದಿ ಮಂಡಿಸಿದರು. ನಿಶಾ ಪ್ರಕಾಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments