ಮೀಸಲಾತಿ ಹೆಚ್ಚಳ ಅನುಮೋದನೆ ಪಡೆಯಲು ವಿಶೇಷ ಅದಿವೇಶನ ಸಧ್ಯಕಿಲ್ಲ

ಎಸ್ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಹಳ್ಳಕ್ಕೆ ರಾಜ್ಯ ಸರ್ಕಾರ ಸಂಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಲಭಿಸಿದ್ದು, ಇದಕ್ಕಾಗಿ ಸದನದ ಅನುಮೋದನೆ ಪಡೆಯುವುದಕ್ಕೆ ಸದ್ಯಕ್ಕೆ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ.

ನ್ಯಾಯಾಧೀಶ ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಎಂದು ಸಂಪುಟ ಸಭೆ ನಂತರ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಎಸ್‍ಸಿ ಸಮುದಾಯದ ಮೀಸಲಾತಿ ಪ್ರಮಾಣ 15-17ಕ್ಕೆ ಎಸ್‍ಟಿ ಸಮುದಾಯದ ಮೀಸಲಾತಿ ಪ್ರಮಾಣ 3-7ಕ್ಕೆ ಹೆಚ್ಚಳ ಮಾಡಲು ಸರ್ಕಾರ ಕೂಡಲೇ ಆದೇಶದ ಮೂಲಕ ಜಾರಿ ಮಾಡುತ್ತೇವೆ ಎಂದು ಹೇಳಿದರು. ಕ್ಯಾಬಿನೆಟ್ ಒಪ್ಪಿಗೆ ಬಳಿಕ ಮಂಡಲ ಅಧಿವೇಶನಕ್ಕೆ ಕರೆದು, ವಿಧಾನ ಮಂಡಳ ಅಧಿವೇಶನದಲ್ಲಿ ಮೀಸಲಾತಿ ಹೆಚ್ಚಳದ ಬಗ್ಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ಆದರೆ ಸಧ್ಯ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಹಾಗಾಗಿ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಪ್ರಸ್ತಾಪವನ್ನು ಶೆಡ್ಯೂಲ್ 9ಕ್ಕೆ ಸೇರಿಸುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಒಪ್ಪಿಗೆ ಮಡೆದ ನಂತರ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು ಎಂದು ತಿಳಿದು ಬಂದಿದೆ.

Related Posts

Leave a Reply

Your email address will not be published.