ಎಸ್‌ಸಿಡಿಸಿಸಿ ಬ್ಯಾಂಕ್ 79.09 ಕೋಟಿ ರೂ. ಸಾರ್ವಕಾಲಿಕ ದಾಖಲೆ ಲಾಭ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅವರು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬ್ಯಾಂಕ್‌ನ ಸಾಧನೆಯ ಬಗ್ಗೆ ವಿವರಿಸಿದರು. ಆಧುನಿಕ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಸಹಕಾರ ಎಂಬ ಮನೋಧರ್ಮವನ್ನು ಸಮಾಜಮುಖಿ ಕಾರ್ಯಗಳಲ್ಲಿ ಅಂತರ್ಗತಗೊಳಿಸಿ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. ವರದಿ ವರ್ಷದಲ್ಲಿ 15540.80 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು 7221.37ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ 6485.12 ಕೋಟಿ ಮುಂಗಡವನ್ನು ನೀಡಿ, ವ್ಯವಹಾರವನ್ನು ನಡೆಸಿದೆ. ಸತತ 29 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇ.100 ಸಾಧನೆ ಮಾಡಿದೆ.

ಮುಂದಿನ ಯೋಜನೆಗಳಾದ ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ, ಇಂಟರ್ ನೆಟ್ ಬ್ಯಾಂಕಿಂಗ್ ಸೇವೆ ಶೀಘ್ರದಲ್ಲಿ ಆರಂಭ, ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ ಯೋಜನೆ, ಮುಂದಿನ ಅವಧಿಯಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜಾರಾಮ್ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಯಂ ವಾದಿರಾಜ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಎಸ್ ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಹರೀಶ್ಚಂದ್ರ, ಕೆ. ಜೈರಾಜ್ ಬಿ. ರೈ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಕುಶಾಲಪ್ಪ ಗೌಡ, ಎಸ್.ಎನ್. ಮನ್ಮಥ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ ಉಪಸ್ಥಿತರಿದ್ದರು.

Related Posts

Leave a Reply

Your email address will not be published.