ಎಸ್‍ಸಿಡಿಸಿಸಿ ಬ್ಯಾಂಕ್‍ಗೆ ಸಹಕಾರಿ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿ
ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್‍ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಪ್ರಥಮ ಪ್ರಶಸ್ತಿ 20ನೇ ಭಾರಿಗೆ ಲಭಿಸಿದೆ.ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿನಲ್ಲಿ ಸರ್ವಾಂಗಿಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ಎ ವರ್ಗವನ್ನು ಪಡೆದು ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೋರ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಸೇವೆಯ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಎಸ್‍ಸಿಡಿಸಿಸಿ ಬ್ಯಾಂಕ್ ರೈತರಿಗೆ ರುಪೇ ಕಿಸಾನ್ ಕಾರ್ಡ್ ಹಾಗೂ ಬ್ಯಾಂಕ್‍ನ ಎಲ್ಲ ಗ್ರಾಹಕರಿಗೆ ರುಪೇ ಡೆಬಿಟ್ ಕಾರ್ಡ್ ವಿತರಿಸುವ ಮೂಲಕ ಈ ಯೋಜನೆ ಜಾರಿಗೆ ತಂದ ರಾಜ್ಯದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂಬ ಮನ್ನಣೆಗೂ ಪಾತ್ರವಾಗಿದೆ.