ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು.
ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸೈಂಟ್ ಜೋಕಿಮ್ ಚರ್ಚ್ ಪಾಲನ ಮಂಡಳಿಯ ಕಾರ್ಯದರ್ಶಿ ಜೆಸಿಂತಾ ವೇಗಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಈಶ್ವರ್, ಸೈಂಟ್ ಜೋಕಿಮ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಿರಣ್ ಕುಮಾರ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಲತಾ, ಸೈಂಟ್ ಜೋಕಿಮ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷ ಉಪಸ್ಥಿತರಿದ್ದರು.
ಕಾಲೇಜು ವಿಭಾಗದ ಉಪನ್ಯಾಸಕಿ ಸುಜಾ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ವಂದಿಸಿದರು. ಕಾರ್ಯಕ್ರಮವನ್ನು ಸೈಂಟ್ ಆನ್ಸ್ ಶಾಲೆಯ ಸಹ ಶಿಕ್ಷಕಿ ಲತಾ ನಿರೂಪಿಸಿದರು.
