ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗದಿಂದ ಶೈಕ್ಷಣಿಕ ಅಧ್ಯಯನ ಪ್ರವಾಸ

ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗವು ಕುಪ್ಪಳಿಗೆ ವಿದ್ಯಾರ್ಥಿಗಳಿಗಾಗಿ ಎರಡು ದಿನದ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಆಯೋಜಿಸಿತ್ತು.ರಾಷ್ಟ್ರಕವಿ ಕುವೆಂಪು ಅವರ ಕುರಿತು ವಿದ್ಯಾರ್ಥಿಗಳಲ್ಲಿ ಮಾಹಿತಿ ಮತ್ತು ಆಸಕ್ತಿ ಮೂಡಿಸುವ ದೃಷ್ಟಿಯಿಂದ ಕುವೆಂಪು ಅವರ ಜನ್ಮಸ್ಥಳವಾದ ಕುಪ್ಪಳಿಗೆ ಅಧ್ಯಯನ ಪ್ರವಾಸ ಮಾಡಲಾಯಿತು.

ಈ ಸಂದರ್ಭದಲ್ಲಿ ಕುವೆಂಪು ಅವರು ವಾಸವಾಗಿದ್ದ ಕವಿಮನೆ, ಕವಿಶೈಲದ ಜೊತೆಯಲ್ಲಿ ಕುವೆಂಪು ಅವರ ಸಾಹಿತ್ಯ ರಚನೆಗೆ ಪ್ರೇರಣೆ ನೀಡಿದ ನವಿಲು ಕಲ್ಲು, ರಾಮತೀರ್ಥ ಮತ್ತು ತೇಜಸ್ವಿ ಸ್ಮಾರಕ, ಕಲಾ ಭವನಗಳಿಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಕಡಿದಾಳ್ ಪ್ರಕಾಶ್, ಖಜಾಂಚಿ ಮನುದೇವ್ ಮತ್ತು ಪ್ರಾಧ್ಯಾಪಕರಾದ ರಾಜಶೇಖರ ಹಳೆಮನೆ, ನವನೀತ್ ಕುಮಾರ್ ಉಪಸ್ಥಿತರಿದ್ದರು.
