ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ ಶ್ರೀ ಧ. ಮಂ ಕಾಲೇಜಿನ ಎನ್ಎಸ್ಎಸ್ ಘಟಕದ ನೇತೃತ್ವದಲ್ಲಿ ಯೂಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ & ರೋವರ್ಸ್, ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿ ಆಶ್ರಯದಲ್ಲಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ, ಮಂಗಳೂರು ಮತ್ತು ಎಸ್.ಡಿ.ಎಂ. ಆಸ್ಪತ್ರೆ, ಉಜಿರೆ ಸಹಯೋಗದೊಂದಿಗೆ ದಿನಾಂಕ 15-12-2022 ರಂದು ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. 

      ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ರೋಗವಿಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕಿ ಡಾ. ತೇಜಸ್ವಿನಿಯವರು ಮಾತನಾಡಿ,‌ “ರಕ್ತವನ್ನು ಕೃತಕವಾಗಿ ತಯಾರು ಮಾಡಲು ಆಗುವುದಿಲ್ಲ. ಒಂದು ಯೂನಿಟ್ ರಕ್ತದಿಂದ 3 ಜೀವಗಳನ್ನು ಉಳಿಸಬಹುದು. ಆದ್ದರಿಂದಾಗಿ, ರಕ್ತದಾನ ಮಾಡಲು ನಾವು ಜನರನ್ನು ಪ್ರೇರೇಪಿಸಬೇಕು” ಎಂದು ರಕ್ತದಾನದ ಮಹತ್ವವನ್ನು ತಿಳಿಸಿದರು. 

       ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 223 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

 sdm ujire

     ಈ ಸಂದರ್ಭ ಎನ್ಎಸ್ಎಸ್ ಯೋಜನಾಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಹಾಗೂ ಶ್ರೀಮತಿ ದೀಪ ಆರ್ ಪಿ, ಯೂಥ್ ರೆಡ್ ಕ್ರಾಸ್ ಸಂಯೋಜಕರಾದ ಶ್ರೀಮತಿ ಪೂಜಿತ ವರ್ಮ, ರೇಂಜರ್ಸ್ & ರೋವರ್ಸ್ ಅಧಿಕಾರಿಗಳಾದ ಶ್ರೀ ಪ್ರಸಾದ್ ಕುಮಾರ್ ಹಾಗೂ ಡಾ. ರತ್ನಾವತಿ ಕೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿಗಳ ಸಂಯೋಜಕರು ಉಪಸ್ಥಿತರಿದ್ದರು. 

     ಎನ್ಎಸ್ಎಸ್ ಸ್ವಯಂಸೇವಕರಾದ ನವನೀತ್ ಕೃಷ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅನನ್ಯ ವಂದಿಸಿದರು.

Related Posts

Leave a Reply

Your email address will not be published.