ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಚಯ’ ವಿಶೇಷ ಕಾರ್ಯಕ್ರಮ
ಉಜಿರೆ: ಶ್ರೇಷ್ಠ ಹವ್ಯಾಸಗಳು ಮಾನವನ ಅಭಿವೃದ್ಧಿಗೆ ಪೂರಕ ಎಂದು ರುಡ್ ಸೆಟಿ ಸಂಸ್ಥೆಯ ತರಬೇತುದಾರೆ ಅನಸೂಯಾ ಅಭಿಪ್ರಾಯಪಟ್ಟರು.
ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇತ್ತೀಚೆಗೆ ಹಾಬಿ ಸರ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ‘ಸಂಚಯ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಹವ್ಯಾಸಗಳಲ್ಲಿ ತೊಡಗುವುದರಿಂದ ಸಂತೋಷ ಲಭಿಸುತ್ತದೆ. ಮನುಷ್ಯನ ಜೀವನವನ್ನು ಹಸನುಗೊಳಿಸುವ ಶಕ್ತಿ ಉತ್ತಮ ಹವ್ಯಾಸಗಳಿಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅವರು, ವಿದ್ಯಾರ್ಥಿಗಳು ಕನಿಷ್ಠ ಮೂರು ಉತ್ತಮ ಹವ್ಯಾಸಗಳನ್ನು ಹೊಂದಿರಬೇಕು ಎಂದರು.
ಹಲವು ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಹಾಬಿ ಸರ್ಕಲ್ ಸಂಯೋಜಕಿ ಅಭಿಜ್ಞಾ ಉಪಾಧ್ಯಾಯ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕಿ ಅನ್ನಪೂರ್ಣ ವಂದಿಸಿದರು. ಮಾನಸ ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು.
*ಸಮಾರೋಪ ಸಮಾರಂಭ*
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್.ಡಿ.ಎಂ. ಕಾಲೇಜಿನ ಕಲಾ ನಿಕಾಯದ ಡೀನ್ ಡಾ. ಶಲೀಫ್ ಕುಮಾರಿ ಅಭ್ಯಾಗತರಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣೆಯ ಮಾತುಗಳನ್ನಾಡಿದರು.
ಹಾಬಿ ಸರ್ಕಲ್ ಸಂಯೋಜಕಿ ಅಭಿಜ್ಞಾ ಉಪಾಧ್ಯಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಬಗ್ಗೆ ಮನೋಜ್ ಅಭಿಪ್ರಾಯ ಹಂಚಿಕೊಂಡರು. ಅಭಿರಾಮ್ ಭಾಗವತ್ ಸ್ವಾಗತಿಸಿ, ಸೃಷ್ಟಿ ವಂದಿಸಿದರು. ನಿಸರ್ಗ ಕಾರ್ಯಕ್ರಮ ನಿರೂಪಿಸಿದರು.