ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆಗೆ ಪಿಎಚ್ ಡಿ ಪದವಿ
ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾ
ಏ.ಜೆ.ಇವರು ಮಂಡಿಸಿದ “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್
ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು
ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ. ಗೀತಾ ಏ.ಜೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ
ಬಿಳಿನೆಲೆ ಗ್ರಾಮದವರಾಗಿದ್ದು, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ನಿವಾಸಿ., ಕುವೆಂಪು ವಿಶ್ವವಿದ್ಯಾಲಯದ
ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸತ್ಯಪ್ರಕಾಶ್ ಎಂ. ಆರ್ ಅವರ
ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ರಚಿಸಲಾಗಿತ್ತು.