ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ :SDPI ಪ್ರಶ್ನೆ

ಮಂಗಳೂರು ಡಿ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್ ಗಿರಿ ಮಿತಿ ಮೀರುತ್ತಿದ್ದು ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿ ಯನ್ನು ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ದುಷ್ಟ ಶಕ್ತಿಗಳು ಶ್ರಮಿಸುತ್ತಿದೆ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾದ್ಯತೆಗಳಿವೆ. ಪೊಲೀಸ್ ಇಲಾಖೆ ನಿರ್ವಹಿಸಬೇಕಾದ ಕಾನೂನು ಸುವ್ಯವಸ್ಥೆಯನ್ನು ಸಂಘ ಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ ಎಂದು SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಗೊಳಿಸಿದ ಅವರು ಇತ್ತೀಚೆಗೆ ಮಂಗಳೂರಿನ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಅಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ಯುವಕನಿಗೆ ಥಳಿಸಿದ್ದಾರೆ . ಆ ನಂತರ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಗೂಂಡಾಗಳು ನಿನ್ನೆ ಬಂಟ್ವಾಳ ತಾಲೂಕಿನ ರಾಯಿಯಲ್ಲಿ ಸುಳ್ಳು ಆರೋಪ ಹೊರಿಸಿ ಅಮಾಯಕ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಭೀಕರ ವಾಗಿ ಹಲ್ಲೆ ನಡೆಸುವ ಮೂಲಕ ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿ ಯನ್ನು ರಾಜಾರೋಷವಾಗಿ ಮಾಡಿದ್ದಾರೆ. ಗಂಭೀರ ಸ್ವರೂಪದ ಗಾಯ

Related Posts

Leave a Reply

Your email address will not be published.