ಮೂಲ್ಕಿ-ಮೂಡಬಿದರೆ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೋ ನಾಮಪತ್ರ ಸಲ್ಲಿಕೆ
ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೋ ಅವರು ಸೋಮವಾರ ಮೂಡುಬಿದಿರೆ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರ್, ಸೂರಿಂಜೆ ಗ್ರಾಮ ಪಂಚಾಯತ್ ಸದಸ್ಯ ಮಹಿಳಾ ಮಲಿಕ್ ಸೂರಿಂಜೆ, ಮಹಿಳಾ ರಾಷ್ಟ್ರೀಯ ಮುಖಂಡೆ ಆಯೇಷಾ ಬಜ್ಪೆ ಈ ಸಂದರ್ಭದಲ್ಲಿದ್ದರು.