ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ
2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಉಡುಪಿ ದ್ವಿತೀಯ, ಕೊಡಗು ತೃತೀಯ ಸ್ಥಾನ ಪಡೆದುಕೊಂಡಿದೆ.
ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 80.72 ವಿದ್ಯಾರ್ಥಿನಿಯರು ಹಾಗೂ ಬಾಲಕರು ಶೇ 69.05 ಸಾಧಿಸಿದ್ದಾರೆ.
ಕಲಾವಿಭಾಗದಲ್ಲಿ ಬೆಂಗಳೂರಿನ ಜಯನಗರದ ಎನ್‍ಎಂಕೆಆರ್ ವಿ ಮಹಿಳಾ ಕಾಲೇಜಿನ ತಬಸುಮ್ ಶೇಕ್‍ಗೆ 593 ಅಂಕಗಳು, ಮೂಡುಬಿದರೆಯ ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗ ಅನನ್ಯ ಕೆ.ಎ, 600 ಅಂಕಗಳು, ವಿಜ್ಞಾನ ವಿಭಾಗದಲ್ಲಿ ಕೋಲಾರದ ಜ್ಞಾನಗಂಗೊತ್ರಿ ಶ್ರೀನಿವಾಸಪುರ ಕಾಲೇಜು ಕೌಶಿಕ್ ಎಸ್, 596 ಅಂಕಗಳು ಬೆಂಗಳೂರು ಆರ್ ವಿ ಪಿಯು ಕಾಲೇಜಿನ ಸುರಭಿ ಎಸ್, 596 ಅಂಕಗಳು ಪಡೆದುಕೊಂಡಿದ್ದಾರೆ.