HomeFresh Newsಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ

ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ

ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಉಜ್ಜಿಕೊಂಡು ಹೋಗಿ ಪಲ್ಟಿಯಾದ ಘಟನೆ ಸೆ.20ರ ಮುಂಜಾನೆ ನಡೆದಿದೆ.

ಘಟನೆಯಲ್ಲಿ ಮದ್ಯದ ಲೋಡ್ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿದ್ದು, ಲಾರಿ ಚಾಲಕ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ

ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಲಾರಿಯನ್ನು ಅದರ ಚಾಲಕ ಶಮೀರ್‌ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದರೆನ್ನಲಾಗಿದೆ. ಈ ವೇಳೆ ಎದುರಿನಿಂದ ಸಕಲೇಶಪುರ ಕಡೆಯಿಂದ ಬರುತ್ತಿದ್ದ ಬೆಂಗಳೂರು ನೆಲಮಂಗಲ ನಿವಾಸಿ ರಾಜ ಎಂ.(56) ಅವರಿಗೆ ಸೇರಿದ ಮದ್ಯದ ಲೋಡ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದ್ದಾರೆ, ಡಿಕ್ಕಿಯ ರಭಸಕ್ಕೆ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಉಜ್ಜಿಕೊಂಡು ಹೋಗಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಘಟನೆಯಿಂದ ವಾಹನಗಳು ಜಖಂಗೊಂಡಿದ್ದು, ಮದ್ಯದ ಲೋಡ್‌ಗೂ ಹಾನಿಯಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಲಾರಿ ಮಾಲೀಕರಾದ ರಾಜ ಎಂ. ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

swarna sep 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments