ನವಮಂಗಳೂರಿಗೆ ಆಗಮಿಸಿದ್ದ ಸೆವೆನ್ ಸೀಸ್ ಎಕ್ಸ್ ಪ್ಲೋರರ್ ಹಡುಗು

ನವ ಮಂಗಳೂರು ಬಂದರಿಗೆ `ಸೆವೆನ್ ಸೀಸ್ ಎಕ್ಸ್ ಪ್ಲೋರರ್ ‘ ಹಡಗು ಆಗಮಿಸಿದ್ದು, ಇದು ಈ ಋತುವಿನ ಎರಡನೇ ಕ್ರೂಸ್ ಹಡಗು ಆಗಿದೆ. ಈ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿ ವರ್ಗದ ಸದಸ್ಯರಿದ್ದರು. ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರನ್ನು ಎನ್‍ಎಂಪಿಎ ಮತ್ತು ಎಂಪಿಎ ಅಧ್ಯಕ್ಷ ಡಾ. ಎ.ವಿ. ರಮಣ ಸ್ವಾಗತ ಕೋರಿದರು.

ಈ ತಂಡದ ಸದಸ್ಯರು ನಗರದ ಸಂತ ಅಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ, ಕುದ್ರೋಳಿ ದೇವಸ್ಥಾನ, ಸ್ಥಳೀಯ ಮಾರುಕಟ್ಟೆ, ಗೋಡಂಬಿ ಕಾರ್ಖಾನೆ, ಕಾರ್ಕಳ ಗೋಮಟೇಶ್ವರ ಪ್ರತಿಮೆ, ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಭೇಟಿ ನೀಡಿದರು.

ಕತರ್‍ನಿಂದ ಮಾಲ್ಡೀವ್ಸ್‍ಗೆ ತೆರಳುವ ಮಾರ್ಗದಲ್ಲಿ ಈ ಹಡಗು ಭಾರತಕ್ಕೆ ಬಂದು ಮೊರ್ಮುಗೋ ಬಂದರಿನಲ್ಲಿ ನಿಂತಿತ್ತು. ಬಳಿಕ ಶುಕ್ರವಾರ ಮಂಗಳೂರಿಗೆ ಆಗಮಿಸಿತು. ಪ್ರಯಾಣಿಕರಿಗೆ ಯಕ್ಷಗಾನ ಮತ್ತು ಸಾಂಪ್ರದಾಯಿಕ ಡೋಲು (ಚಂಡೆ) ಮುಂತಾದ ಸಾಂಪ್ರದಾಯಿಕ ಶೈಲಿಯಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು.

Related Posts

Leave a Reply

Your email address will not be published.