ಬೆಂಗಳೂರಿನಲ್ಲಿ ಡಿ.18ರಂದು ಶಕ್ತಿಸಂಗಮ

ರಾಜ್ಯ ಬಿಜೆಪಿಯ 24 ಪ್ರಕೋಷ್ಟಗಳ ರಾಜ್ಯ ಸಮಾವೇಶ ಶಕ್ತಿಸಂಗಮವು ಡಿಸೆಂಬರ್ 18ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ ಎಂದು ರಾಜ್ಯ ಸಂಚಾಲಕರಾದ ಕೆ. ಪ್ರತಾಪ ಸಿಂಹ ನಾಯಕ್ ಹೇಳಿದರು.
ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಮಂಡಲ, ಜಿಲ್ಲೆ ಹಾಗೂ ರಾಜ್ಯ ಸಮಿತಿ ಸಂಚಾಲಕ, ಸಹ ಸಂಚಾಲರು, ಜಿಲ್ಲಾ ಸಂಯೋಜಕರು, ಸಂಕುಲ ಪ್ರಮುಖರು ಇದಕ್ಕೆ ಅಪೇಕ್ಷಿತರು. ದಕ್ಷಿಣ ಕನ್ನಡ ಜಿಲ್ಲೆಯಿಂದ 1,500 ಕ್ರಿಯಾಶೀಲಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅಧ್ಯಕ್ಷತೆಯಲ್ಲಿ ಈ ಸಮಾವೇಶ ನಡೆಯಲಿದ್ದು, ಕೇಂದ್ರದ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಲಿದ್ದಾರೆ. ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪ ಉಪಸ್ಥಿತರಿರಲಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ರವಿಶಂಕರ್ ಮಿಜಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
