ಹೃದಯಾಘಾತದಿಂದ ಹೆಚ್ಚುತ್ತಿರುವ ಮಕ್ಕಳ ಸಾವು ಪ್ರಕರಣ; ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು : ಶಕುಂತಳಾ ಶೆಟ್ಟಿ
ಪುತ್ತೂರಿನಲ್ಲಿ ಇತ್ತೀಚೆಗೆ ಮಕ್ಕಳು ಸಾವನ್ನಪ್ಪುವ ವಿಚಾರಗಳು ಹೆಚ್ಚಾಗಿ ಕಾಣುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಗಮನಹರಿಸಿಬೇಕೆಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಇದು ಪುತ್ತೂರಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಸಂಭವಿಸುತ್ತಿದೆ. ಇದನ್ನು ಆರೋಗ್ಯ ಇಲಾಖೆ ಗಮನಹರಿಸಬೇಕು. ಯಾವ ಕಾರಣದಿಂದ ಈ ಕಾಯಿಲೆಗಳು ಬರುತ್ತಿದೆ. ಸಣ್ಣ ವಯಸ್ಸಿನವರಿಗೂ ಹೃದಯಾಘಾತ, ದೊಡ್ಡವರಿಗೂ ಹೃದಯಾಘಾತ ಸಂಭವಿಸುತ್ತಿದೆ. ಇದನ್ನು ಆರೋಗ್ಯ ಇಲಾಖೆ ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ಲಸಿಕೆ ತೆಗೆದುಕೊಂಡದ್ದರಿಂದ ಹೀಗಾಗುತ್ತಿದೆಯಾ ಎಂಬ ಬಗ್ಗೆ ತಿಳಿದು, ಜನರಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಶಕುಂತಳಾ ಶೆಟ್ಟಿ ಹೇಳಿದರು.