ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿ ಪ್ರಸ್ತುತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಹಾಗೂ ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದೊಂದಿಗೆ ಅಂದಾಜು ಸುಮಾರು 100 ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಇವರ ನೇತೃತ್ವದಲ್ಲಿ ನೆರವೇರಿತು.


ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.


