ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ : ಬಿ. ವೈ ರಾಘವೇಂದ್ರ

ಶಿಕಾರಿಪುರ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ ಒಟ್ಟು 23 ಜನ ನೇರಪಾವತಿ, ಪೌರಕಾರ್ಮಿಕರು ಖಾಯಂ ನೌಕರ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು.

ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಖಾಯಂ ಪೌರಕಾರ್ಮಿಕರುಗಳಿಗೆ ನೀಡುತ್ತಿದ್ದ ರೂ. 3,500 ದಿಂದ ರೂ 7,000/- ಗಳಿಗೆ ಹೆಚ್ಚಿಸಲಾಗಿದೆ ಈ ಕಾರ್ಯಕ್ಕೆ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಊರನ್ನು ಸ್ವಚ್ಛಗೊಳಿಸುವ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ, ದೇಶ ಸ್ವಚ್ಛವಾಗಿರಲು ನಿಮ್ಮ ಕೆಲಸವನ್ನು ದೇಶದ ಕೆಲಸವೆಂದು ಪರಿಗಣಿಸಿ. ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೇಶದ ಆಸ್ತಿಯನ್ನಾಗಿ ಮಾಡಿ ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನಿಯ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಪುರಸಭೆ ಅಧ್ಯಕ್ಷರಾದ ರೇಖಾಭಾಯಿ ಮಂಜುನಾಥ್ ಸಿಂಗ್,ದೇವರಾಜ್ ಅರಸ್ ಅಭಿವೃದ್ಧಿ ನಿಗಮದ ಸದಸ್ಯರಾದ ಹಾಲಪ್ಪ, ಪುರಸಭೆಯ ಸರ್ವ ಸದಸ್ಯರುಗಳು , ಮಾಜಿ ಅಧ್ಯಕ್ಷರು ಹಾಗೂ ಮುಖ್ಯ ಅಧಿಕಾರಿ ಭರತ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.