ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಯಿಂದ ಕಲಾತಂಡಗಳಿಗೆ ಗೌರವಾರ್ಪಣೆ

ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು ತಿಳಿಸಿದ್ದಾರೆ.

ಉಡುಪಿಯ ರಥಬೀದಿಯಲ್ಲಿರುವ ಶಿರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥರು ಈ ಹಿಂದೆ ವಿಜೃಂಭಣೆಯಿಂದ ಕೃಷ್ಣಜನ್ಮಾಷ್ಟಮಿಯನ್ನು ಆಚರಿಸುತ್ತಿದ್ದರು. ಅವರಂತೆಯೇ ಸಂಭ್ರಮ, ಸಡಗರದಿಂದ ಅಷ್ಟಮಿಯನ್ನು ಆಚರಿಸಲಾಗುತ್ತದೆ. ಸೆ.7ರಂದು ಸಂಜೆ 4 ರಿಂದ 8 ಗಂಟೆಯವರೆಗೆ ರಥಬೀದಿಯ ತೆಂಕು ಸುತ್ತಿನಲ್ಲಿ ಹಾಕಿರುವ ರಥದ ಗುತ್ತಿನ ಅನ್ನ ವಿಠಲ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಶಿರೂರು ಮಠಾಧೀಶರು ಹೇಳಿದರು.

Related Posts

Leave a Reply

Your email address will not be published.