ಶಿರೂರು : ಟೂರಿಸ್ಟ್ ಕಾರಿನಲ್ಲಿ ಮೃತದೇಹ ರವಾನೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದುದ್ದನ್ನು ಶಿರೂರ್ ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್ ಚಾಲಕ ತಡೆದು ನಿಲ್ಲಿಸಿದ ಘಟನೆ ನಡೆದಿದೆ.
ಸ್ವಿಫ್ಟ್ ಡಿಜೈರ್ ಕಾರಿನ ಢಿಕ್ಕಿಯಲ್ಲಿ ಮೃತದೇಹವನ್ನು ಇರಿಸಿ ರವಾನೆ ಮಾಡುತ್ತಿದ್ದ. ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಆಂಬ್ಯುಲೆನ್ಸ್‌ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂದು ವಾರೀಸುದಾರರು ಹೇಳಿದ್ದಾರೆ. ಉಡುಪಿಯಿಂದ ಉತ್ತರ ಕನ್ನಡ ಕಡೆಗೆ ಕಾರು ತೆರಳುತ್ತಿತ್ತು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
