HomeFresh Newsಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಸ್ವಯಂ ಸೇವಕರಾಗಿ ಮಾಹೆಯ ವಿದ್ಯಾರ್ಥಿಗಳ ಆತಿಥ್ಯ

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಸ್ವಯಂ ಸೇವಕರಾಗಿ ಮಾಹೆಯ ವಿದ್ಯಾರ್ಥಿಗಳ ಆತಿಥ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡು ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿದರು. ಇಂದು ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪ್ರಮುಖ ಆಕರ್ಷಣೆಯೆಂದರೆ, ವೆಲ್‌ಕಾಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಮಹಾಯಾಗದ ಅನ್ನಸಂತರ್ಪಣೆ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು. ವೆಲ್‌ಕಾಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (ಡಬ್ಲ್ಯೂ ಜಿ ಎಸ್ ಎಚ್ ಎ), ಮಾಹೆ, ಮಣಿಪಾಲವು ಭಾರತದ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಆತಿಥ್ಯ ಶಿಕ್ಷಣವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿಗಳು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಮೂರನೇ ದಿನದಂದು ಜನರಿಗೆ ಆಹಾರವನ್ನು ಬಡಿಸುವಲ್ಲಿ, ದೇವಾಲಯದ ಸೇವಾ ಕರ್ತವ್ಯದಲ್ಲಿ ಭಾಗವಹಿಸಿದ್ದಾರೆ. ಸ್ವಾಗತ ಸಮಿತಿ, ಪ್ರಸಾದ ಸಮಿತಿ ಮತ್ತು ಸಾಂಸ್ಕೃತಿಕ ಸಮಿತಿಯಂತಹ ವಿವಿಧ ಸಮಿತಿಗಳಲ್ಲಿ ಸ್ವಯಂ ಸೇವಕರಾಗಿ ಜನರಿಗೆ ಮಾರ್ಗದರ್ಶನ ನೀಡಿದ್ದಾರೆ. ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ ಕಾರ್ಯಗಳಲ್ಲಿ ಈ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಭಾಗವಹಿಸಲಿದ್ದಾರೆ.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments