ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳನ್ನು ಪೂರೈಸಿದೆ.

ಅತಿರುದ್ರ ಮಹಾಯಾಗದ ನಾಲ್ಕನೇ ದಿನವಾದ ಫೆಬ್ರವರಿ 25, 2023 ರ ಶನಿವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಮತ್ತು ಗಣಯಾಗಮಂಟಪದಲ್ಲಿ ಮುಂಜಾನೆ ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನೆರವೇರಲಿದೆ.

ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಂಸ್ಕೃತ ವಿಶ್ವವಿದ್ಯಾಲಯ ಉತ್ತರಾಖಂಡ ಮತ್ತು ಉತ್ತರಪ್ರದೇಶದ ಉಪಕುಲಪತಿಗಳು ಹಾಗೂ ಆಯುರ್ವೇದ ತಜ್ಞರಾದ ಡಾ. ತನ್ಮಯ್ ಗೋಸ್ವಾಮಿ ಅವರಿಂದ ಧಾರ್ಮಿಕ ಉಪನ್ಯಾಸ, ಉದಯೋನ್ಮುಖ ಕಲಾವಿದರಾದ ಗಗನ್ ಗಾಂವ್ಕರ್, ಅನುರಾಧ ಭಟ್, ಸುನೀತಾ ಭಟ್ ಕೊಡುವಿಕೆಯಲ್ಲಿ “ಭಕ್ತಿ ಗಾನ ಸಿಂಚನ” ಮತ್ತು ನೃತ್ಯ ನಿರ್ದೇಶಕ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಅವರ ನೇತೃತ್ವದಲ್ಲಿ ರಾಷ್ಟ್ರದೇವೋಭವಃ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸುವ “ಪುಣ್ಯ ಭೂಮಿ ಭಾರತ”, ಆದರ್ಶ್ ಗೋಖಲೆ ಅವರ ನಿರೂಪಣೆಯಲ್ಲಿ ಜರುಗಲಿದೆ.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.

Related Posts

Leave a Reply

Your email address will not be published.