HomeFresh Newsಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 9ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 9ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಂಟು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, ಯಾಗದ ಕಳೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಅತಿರುದ್ರ ಮಹಾಯಾಗದ ಒಂಬತ್ತನೇ ದಿನವಾದ ಮಾರ್ಚ್ 02, 2023 ರ ಗುರುವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ 6 ರಿಂದ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ ಬೆಳಗ್ಗೆ 06:30 ರಿಂದ ಶತಚಂಡಿಕಾ ಯಾಗ, ಬೆಳಗ್ಗೆ 11:45 ಕ್ಕೆ ಪೂರ್ಣಾಹುತಿ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನೆರವೇರಲಿವೆ.

ಇದರೊಂದಿಗೆ ಸಂಜೆ 6 ರಿಂದ ಹೊರನಾಡು ಶ್ರೀ ಅನ್ನಪೂರ್ಣೆಶ್ವರೀ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ಭೀಮೇಶ್ವರ ಜೋಶಿ ಅವರಿಂದ ಧಾರ್ಮಿಕ ಉಪನ್ಯಾಸ ಮತ್ತು ಸಂಜೆ 7:30 ರಿಂದ, ಸಂಗೀತ ಶಾರದೆ ಶ್ರೀಮತಿ ಸಂಗೀತ ಕಟ್ಟಿ ಕುಲಕರ್ಣಿ ಅವರಿಂದ ಭಕ್ತಿಗಾಯನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments