HomeFresh Newsಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಮೊದಲ ದಿನದ ಅತಿರುದ್ರ ಮಹಾಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಮೊದಲ ದಿನದ ಅತಿರುದ್ರ ಮಹಾಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಶುಭಾರಂಭಗೊಂಡ ಅತಿರುದ್ರ ಮಹಾಯಾಗ, ಮುಂಜಾನೆ ಸಮಯದಲ್ಲಿ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಫಲನ್ಯಾಸಪೂರ್ವಕ ಪ್ರಾರ್ಥನೆ, ಅರಣೀ ಮಥನಪೂರ್ವಕ ಅಗ್ನಿ ಜನನ, ಸಪರಿವಾರ ಶ್ರೀ ಉಮಾಮಹೇಶ್ವರ ದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ ನೆರವೇರಿತು.


ಮಧ್ಯಾಹ್ನ ವಿವಿಧ ಭಜನಾ ಮಂಡಳಿಗಳಿಂದ “ಭಕ್ತಿ ಮಾಧುರ್ಯ” ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಶ್ರೀ ಉಮಾಮಹೇಶ್ವರ ಸನ್ನಿಧಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ ಸಹಸ್ರಾರು ಭಕ್ತಾದಿಗಳು ಶ್ರೀ ದೇವರ ದರ್ಶನವನ್ನು ಮಾಡಿ, ಮಹಾಯಾಗದಲ್ಲಿ ಪಾಲ್ಗೊಂಡು ಮಧ್ಯಾಹ್ನ ನಡೆದ ಮಹಾಅನ್ನಸಂತರ್ಪಣೆ ಪ್ರಸಾದವನ್ನು ಸ್ವೀಕರಿಸಿ ಧನ್ಯರಾದರು. ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಪರೂಪದ “ಅತಿರುದ್ರ ಮಹಾಯಾಗ”ಕ್ಕೆ ಸಾಕ್ಷಿಯಾಗುತ್ತಿದ್ದಾರೆ.


ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments