HomeFresh Newsಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 2ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಶುಭಾರಂಭಗೊಂಡ ಅತಿರುದ್ರ ಮಹಾಯಾಗದ, ಎರಡನೇ ದಿನ ಫೆಬ್ರವರಿ 23, 2023 ರ ಗುರುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ತಿಲಹೋಮ, ಪವಮಾನ ಹೋಮ, ಕೂಷ್ಮಂಡ ಹೋಮ, ನವಕಪ್ರಧಾನ ಹೋಮಪುರಸ್ಸರ ನಾವಕಲಶ ಅಭಿಷೇಕ, ವಟು ಆರಾಧನೆ, ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಏಕ ಕಲಶಾಭಿಷೇಕ ಮತ್ತು ನೆರವೇರಿತು.

ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು. ನಂತರ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಎರಡನೇ ದಿನದ ಅತಿರುದ್ರ ಮಹಾಯಾಗಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸಿ, ಹೊರೆಕಾಣಿಕೆಯನ್ನು ನೀಡಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾದರು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಭಕ್ತಾಭಿಮಾನಿಗಳು ಪ್ರಸಾದವನ್ನು ಸ್ವೀಕರಿಸಿದರು.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments