ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಫೆಬ್ರವರಿ 18, 2023 ರ ಶನಿವಾರದಂದು ಆಚರಿಸಲ್ಪಡುವ ಮಹಾಶಿವರಾತ್ರಿಯು ಅನೇಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ 09:30 ರಿಂದ ಪ್ರಾತಃ ಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ, ಸೂಡ ಇವರಿಂದ “ಅಬ್ಬಗ ದಾರಗ” ತುಳುಪ್ರಸಂಗ ಮತ್ತು “ಬೇಡರ ಕಣ್ಣಪ್ಪ” ಕನ್ನಡ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.


ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ಅತಿರುದ್ರ ಮಹಾಯಾಗ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ಎಂದು ದೇಗುಲದ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದ್ದಾರೆ.

