ಕಡಲು ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಸಾರ್ವಜನಿಕ ಆಸ್ತಿ ರಕ್ಷಣೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಕಡಲ್ಕೊರೆತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ತುರ್ತು ತಡೆಗೋಡೆಗೆ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿಲಾಗಿದೆ. ಅಧಿಕಾರಿಗಳು ಖಾಸಗಿಯವರೊಂದಿಗೆ ಕೈ ಜೋಡಿಸಿದಲ್ಲಿ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಸಹಾಯಕ ಕಮಿಷನರ್ ರಾಜು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್,ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ ಮತ್ತಿತರು ಉಪಸ್ಥಿತರಿದ್ದರು.