ಕಾಪು ಮಾರಿಗುಡಿ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ

ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ಬಳಿಕ ಪ್ರಥಮ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದು ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.

ಪ್ರಸ್ತುತ ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರಕ್ಕೆ ತಮ್ಮ ಮನೆಯ ವತಿಯಿಂದ 99 ಶಿಲಾ ಸೇವೆ ನೀಡುತ್ತಿದ್ದೇವೆ. ಇದೇ ರೀತಿಯಲ್ಲಿ ಜಗದಗಲಕ್ಕೆ ಹರಡಿರುವ ಮಾರಿಯಮ್ಮ ದೇವಿಯ ಭಕ್ತರೆಲ್ಲರೂ ಶಿಲಾ ಸೇವೆ ನೀಡುವ ಮೂಲಕ ಮಾರಿಗುಡಿಯ ಜೀರ್ಣೋದ್ಧಾರದಲ್ಲಿ ಕೈಜೋಡಿಸುವಂತೆ ಅವರು ಮನವಿ ಮಾಡಿದರು
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಸಿನಿಶೆಟ್ಟಿ ತಂದೆ ಸದಾನಂದ ಶೆಟ್ಟಿ,ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮನೋಹರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಪ್ರಮುಖರಾದ ನಡಿಕೆರೆ ರತ್ನಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ದೊರಕಳಗುತ್ತು, ರವಿರಾಜ ಶೆಟ್ಟಿ ಪಂಜಿತ್ತೂರುಗುತ್ತು, ರತ್ನಾಕರ ಹೆಗ್ಡೆ ಕಲೀಲಬೀಡು, ರಮೇಶ್ ಶೆಟ್ಟಿ ಕೊಲ್ಯ, ಲೀಲಾಧರ ಶೆಟ್ಟಿ, ನಿರ್ಮಲ್ ಕುಮಾರ್ ಹೆಗ್ಡೆ, ಜಗದೀಶ್ ಬಂಗೇರ, ಗಂಗಾಧರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.