ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್‌ಜೆಇಸಿ) ಶಿಕ್ಷಕರ ದಿನಾಚರಣೆ 2026ನ್ನು ಕಲಾಂ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು.
ಯುವ ಮನಸ್ಸುಗಳನ್ನು ರೂಪಿಸುವಲ್ಲಿ, ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಹಾಗೂ ಜ್ಞಾನವಂತ ಮತ್ತು ಜವಾಬ್ದಾರಿಯುತ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರು ನೀಡುತ್ತಿರುವ ಅಮೂಲ್ಯ ಕೊಡುಗೆಯನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಭಾರತದ ಖ್ಯಾತ ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ವಿದ್ವಾಂಸ ಹಾಗೂ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣೆಯೂ ಕಾರ್ಯಕ್ರಮದ ಪ್ರಮುಖ ಅಂಶವಾಗಿತ್ತು. ದೇಶಾದ್ಯಂತ ಅವರ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಲಾಗುತ್ತದೆ.
ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಮಂಗಳೂರಿನ ಪ್ರಾಧ್ಯಾಪಕ ಹಾಗೂ ರಿಜಿಸ್ಟ್ರಾರ್ ಡಾ. ರೊನಾಲ್ಡ್ ನಜರೆತ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎಸ್‌ಜೆಇಸಿ ನಿರ್ದೇಶಕರಾದ ವಂ.ಫಾ. ವಿಲ್ಫ್ರೆಡ್ ಪ್ರಕಾಶ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್‌ಜೆಇಸಿ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಹಾಗೂ ಸಹಾಯಕ ನಿರ್ದೇಶಕರಾದ ವಂ.ಫಾ. ಕೆನ್ನೆತ್ ರೇನರ್ ಕ್ರಾಸ್ಟಾ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ಸ್ವಾಗತ ಭಾಷಣದ ನಂತರ ಡಾ. ಎಸ್. ರಾಧಾಕೃಷ್ಣನ್ ಅವರ ಗೌರವಾರ್ಥ ಪುಷ್ಪನಮನ ಸಲ್ಲಿಸಲಾಯಿತು. ಶಿಕ್ಷಣ ಮತ್ತು ತತ್ವಶಾಸ್ತ್ರ ಕ್ಷೇತ್ರಕ್ಕೆ ಅವರ ಮಹತ್ವದ ಕೊಡುಗೆಯನ್ನು ಸ್ಮರಿಸಲಾಯಿತು.
ಶಿಕ್ಷಕರ ದಿನದ ಕೇಕ್ ಕತ್ತರಿಸುವ ಕಾರ್ಯಕ್ರಮವು ಆಚರಣೆಯ ಪ್ರಮುಖ ಆಕರ್ಷಣೆಯಾಗಿತ್ತು. ಇದು ಎಸ್‌ಜೆಇಸಿ ಸಮುದಾಯದ ವತಿಯಿಂದ ಶಿಕ್ಷಕ ವೃಂದದ ಬದ್ಧತೆ ಮತ್ತು ಸೇವೆಗೆ ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ವಿದ್ಯಾರ್ಥಿಯೊಬ್ಬರು ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ವಿಶೇಷ ಭಾಷಣ ಮಾಡಿದರು. ನಂತರ ಡಾ. ರಿಯೋ ಡಿಸೋಜಾ ಹಾಗೂ ಮುಖ್ಯ ಅತಿಥಿ ಡಾ. ರೊನಾಲ್ಡ್ ನಜರೆತ್ ಮಾತನಾಡಿದರು.
ಡಾ. ನಜರೆತ್ ಅವರು ಬದಲಾಗುತ್ತಿರುವ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವಲ್ಲಿ ಶಿಕ್ಷಕರ ಮಹತ್ವದ ಪಾತ್ರವನ್ನು ವಿವರಿಸಿದರು. ಮುಖ್ಯ ಅತಿಥಿಗೆ ಗೌರವಾರ್ಥ ಕೃತಜ್ಞತಾ ಸ್ಮರಣಿಕೆ ನೀಡಲಾಯಿತು. ಅಧ್ಯಕ್ಷೀಯ ಭಾಷಣದಲ್ಲಿ ರೆವ. ಫಾ. ವಿಲ್ಫ್ರೆಡ್ ಪ್ರಕಾಶ್ ಡಿಸೋಜಾ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರವನ್ನು ಹಾಗೂ ಶೈಕ್ಷಣಿಕ ಶ್ರೇಷ್ಠತೆ, ಮೌಲ್ಯಗಳು ಮತ್ತು ಸಾಮಾಜಿಕ ಹೊಣೆಗಾರಿಕೆಗೆ ಎಸ್‌ಜೆಇಸಿ ನೀಡುತ್ತಿರುವ ಬದ್ಧತೆಯನ್ನು ಒತ್ತಿಹೇಳಿದರು.
ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯಕ್ರಮದ ಸಂಚಾಲಕಿ ಶ್ರೀಮತಿ ಪ್ರೀತಿ ಜಯಚಂದ್ರ ವಂದನಾರ್ಪಣೆ ಸಲ್ಲಿಸಿದರು. ಬಳಿಕ ಆಟಗಳು ಮತ್ತು ಉಪಹಾರದೊಂದಿಗೆ ಕಾರ್ಯಕ್ರಮವು ಸಂತಸ, ಸೌಹಾರ್ದ ಮತ್ತು ಸಹಭಾಗಿತ್ವದ ವಾತಾವರಣದಲ್ಲಿ ಮುಕ್ತಾಯಗೊಂಡಿತು.
ಎಸ್‌ಜೆಇಸಿಯಲ್ಲಿ ಶಿಕ್ಷಕರ ದಿನಾಚರಣೆ ಶಿಕ್ಷಕರ ಸಮರ್ಪಣೆ, ಬದ್ಧತೆ ಮತ್ತು ವಿದ್ಯಾರ್ಥಿಗಳ ಬದುಕಿನ ಮೇಲೆ ಬೀರುವ ಶಾಶ್ವತ ಪ್ರಭಾವವನ್ನು ಗೌರವಿಸುವ ಅರ್ಥಪೂರ್ಣ ಸಂದರ್ಭವಾಗಿದೆ. ಶಿಕ್ಷಕರು ಕೇವಲ ಜ್ಞಾನವನ್ನು ನೀಡುವವರಲ್ಲ; ಅವರು ಮಾರ್ಗದರ್ಶಕರು, ಪ್ರೇರಕರು ಹಾಗೂ ಆದರ್ಶ ವ್ಯಕ್ತಿಗಳಾಗಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನುಅರಿಯಲು ಮತ್ತು ಆತ್ಮವಿಶ್ವಾಸ ಹಾಗೂ ಪ್ರಾಮಾಣಿಕತೆಯಿಂದ ತಮ್ಮ ಗುರಿಗಳನ್ನು ಸಾಧಿಸಲು ಪ್ರೇರೇಪಿಸುತ್ತಾರೆ. ಈ ಆಚರಣೆಯು ಶಿಕ್ಷಕರ ಮೇಲಿನ ಸಂಸ್ಥೆಯ ಆಳವಾದ ಗೌರವ ಮತ್ತು ಕೃತಜ್ಞತೆಯನ್ನು ಪ್ರತಿಬಿಂಬಿಸಿತು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
RELATED ARTICLES

