HomeUncategorizedಅಂತರರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಎಸ್‌ಜೆಇಸಿ ವಿದ್ಯಾರ್ಥಿ

ಅಂತರರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಎಸ್‌ಜೆಇಸಿ ವಿದ್ಯಾರ್ಥಿ

ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ನಿಖಿಲ್ ಎ. ಪೂಜಾರಿ ಅವರು ವರ್ಲ್ಡ್ ಫಿಟ್ನೆಸ್ ಫೆಡರೇಶನ್ ಓಫ್ ಯೋಗಾಸನ ಸ್ಪೋರ್ಟ್ಸ್ – ಇಂಡಿಯನ್ ನ್ಯಾಷನಲ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ – 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ಶಿಪ್‌ವು ಜೂನ್ 26 ರಿಂದ 28, 2026 ರವರೆಗೆ ಉತ್ತರಾಖಂಡದ ಹರಿದ್ವಾರದ ರೂರ್ಕಿಯ ಸಿಓಇಆರ್ ವಿಶ್ವವಿದ್ಯಾಲಯದಲ್ಲಿ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಪ್ರತಿಭಾವಂತ ಯೋಗಾಸನ ಕ್ರೀಡಾಪಟುಗಳು ಭಾಗವಹಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ನಿಖಿಲ್ ಎ. ಪೂಜಾರಿ
ಅವರು ಅತ್ಯುತ್ತಮ ಪ್ರದರ್ಶನ ನೀಡಿ ಆರ್ಟಿಸ್ಟಿಕ್ ಸೋಲೊ ಯೋಗಾಸನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಸಾಂಪ್ರದಾಯಿಕ (ಟ್ರೆಡಿಷನಲ್) ಯೋಗಾಸನ ವಿಭಾಗದಲ್ಲಿ ಆರನೇ ಸ್ಥಾನವನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಅಮೋಘ ಸಾಧನೆಯ ಫಲವಾಗಿ ಅವರು ಸೆಪ್ಟೆಂಬರ್ 2026 ರಲ್ಲಿ ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಇದು ಕಾಲೇಜಿಗೆ ಮಾತ್ರವಲ್ಲದೆ ರಾಜ್ಯ ಹಾಗೂ ದೇಶಕ್ಕೂ ಹೆಮ್ಮೆಯ ವಿಷಯವಾಗಿದೆ. ನಿಖಿಲ್ ಎ. ಪೂಜಾರಿ ಅವರ ಈ ವಿಶಿಷ್ಟ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು,
ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸುವಂತೆ ಶುಭ ಹಾರೈಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments