ಕಾಪು:ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಸಾಮಾಜಿಕ ಸೇವೆಯಲ್ಲಿ ಮಾತ್ರವಲ್ಲದೆ ದೇವಳದ ಸೇವಾ ಕೈಂಕರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಸ್ವರ್ಣ ಗದ್ದುಗೆಯ ನಿರ್ಮಾಣ ಹಂತದಲ್ಲಿ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕರಾಗಿ, ಪ್ರಚಾರ ಸಮಿತಿಯ ಸಂಚಾಲಕರಾಗಿ ಪೂರ್ಣ ರೂಪೇಣ ಸಹಕಾರವನ್ನು ನೀಡಿರುವ ಸಮಾಜ ಸೇವಕ ಕಾಪು ಜಯರಾಮ ಆಚಾರ್ಯರವರನ್ನು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ, ಭಕ್ತರ ಉಪಸ್ಥಿತಿಯಲ್ಲಿ ಸೇವಾರತ್ನ ಬಿರುದಿನೊಂದಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ಮಾಧವ ಆರ್. ಪಾಲನ್, ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಯೋಗೀಶ್ ಶೆಟ್ಟಿ ಪಳ್ಳಿ, ರವಿರಾಜ್ ಶೆಟ್ಟಿ ಕಾಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

