HomeFresh Newsಸೋಮೇಶ್ವರದಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರ ವಶ

ಸೋಮೇಶ್ವರದಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರ ವಶ

ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಅನ್ಯಧರ್ಮಕ್ಕೆ ಸೇರಿದ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಾರೆಂಬ ಕಾರಣಕ್ಕೆ ತಂಡವೊಂದು ಹಲ್ಲೆ ನಡೆಸಿತ್ತು. ಘಟನೆಯಲ್ಲಿ ಕೇರಳ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರ ಮೂಲದ ಮುಜೀಬ್, ಆಶಿಕ್ ಹಲ್ಲೆಗೊಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ನೈತಿಕ ಪೊಲೀಸ್‍ಗಿರಿ ನಡೆಸಿದ ಆರೋಪದಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.. ಪ್ರಕರಣದ ವಿಚಾರಣೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments