ಬ್ರಹ್ಮಾವರದ ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆಯಲ್ಲಿ “ಸ್ಪರ್ಶ 2024” ಫ್ರೆಷರ್ಸ್ ಡೇ ಆಚರಣೆ

ಬ್ರಹ್ಮಾವರ: ನೂತನ ವಿದ್ಯಾರ್ಥಿಗಳನ್ನು ಗುರುತಿಸಿ ಸ್ವಾಗತಿಸುವ ” ಸ್ಪರ್ಶ 2024″ ಕಾರ್ಯಕ್ರಮವನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಟಿ, ಗಾಯಕಿ, ರೂಪದರ್ಶಿಯಾಗಿರುವ ಮಹಿಮಾ ಭಂಡಾರಿ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿದ್ಯಾರ್ಥಿ ಜೀವನ ಎಂಬುದು ಅನೇಕ ಅವಕಾಶ ಗಳನ್ನು ಹೊಂದಿರುವ ವೇದಿಕೆ ಇದನ್ನು ಸರಿಯಾಗಿ ಉಪಯೋಗಿಸಿದರೆ ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ‌ ಎಂದು ತಿಳಿಸಿದರು. ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ಅವರು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಹಿತನುಡಿಗಳನ್ನಾಡಿ ಶುಭ ಹಾರೈಸಿದರು.

ನಿರ್ದೇಶಿಕಿಯಾದ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಸಾಂಸ್ಕೃತಿಕ ಸಂಯೋಜಕಿಯಾಗಿರುವ ರಾಝಿಕ ,ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು , ಎಲ್ಲಾ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರೆ ,ಉಪನ್ಯಾಸಕಿ ಶ್ರೀಮತಿ ಮಧುಮಿತಾ ಸ್ವಾಗತಿಸಿ, ಅತಿಥಿಗಳ ಪರಿಚಯವನ್ನು ಉಪನ್ಯಾಸಕಿ ಶ್ರೀಮತಿ ಪ್ರಿಯಾ ನಡೆಸಿದರೆ, ಉಪನ್ಯಾಸಕಿ ಶ್ರೀಮತಿ ಅನಿತಾ ವಂದಿಸಿದರು .

Related Posts

Leave a Reply

Your email address will not be published.