ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ : ಅಕ್ಟೋಬರ್ 7 ರವರೆಗೆ ಅವಕಾಶ

ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬ‌ರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ‘ಇತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿ-ಕೊಳ್ಳಲು ಈ ಅಭಿಯಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಪಲಾನುಭವಿಗಳು ಇದರ ಪ್ರಯೋಜನ ಪಡೆಯಬಹುದಾಗಿದ್ದು ಅಲ್ಲದೇ ವಕೀಲರುಗಳಾದ ಸುಬ್ರಾಯ ಭಟ್ , ಸುಕುಮಾರ್ ಕೋಡ್ತುಗುಳಿ , ನಳೀನ್ ಕುಮಾರ್ ಕೋಡ್ತುಗುಳಿ , ಭಾಸ್ಕರ್ ರಾವ್ , ರವೀಂದ್ರ ನಾಥ್ ರೈ , ರಾಮಕೃಷ್ಣ ಎ ಇವರುಗಳನ್ನು ಮಧ್ಯಸ್ಥಿಕರನ್ನಾಗಿ ನೇಮಕ ಮಾಡಲಾಗಿದೆ ಎಂದು ನ್ಯಾಯಲಯ ಕಛೇರಿ ಪ್ರಕಟಣೆ ಮೂಲಕ ತಿಳಿಸಿದೆ.

add - BDG

Related Posts

Leave a Reply

Your email address will not be published.