HomeFresh Newsಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ...

ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ


ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ ಇಂದಿಗೆ 4400 ದಿನ ಪೂರೈಸಿದ ಸಲುವಾಗಿ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಆಚಾರ್ಯ ಮೂಡುಬೆಳ್ಳೆ, ಪ್ರಧಾನ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್, ಏಣಗುಡ್ಡೆ ಶಕ್ತಿ ಕೇಂದ್ರದ ಸಂತೋಷ್, ಕೋಟೆ ಶಕ್ತಿ ಕೇಂದ್ರದ ಹರ್ಷಿತ್, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಭಾಸ್ ಬಲ್ಲಾಳ್, ರಾಜೇಶ್ ಪೂಜಾರಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments