ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ ಪುರಸ್ಕಾರ

ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು.

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಆಯೋಜಿಸಿದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಎಸ್.ಜಗದೀಶ್ಚಂದ್ರ ಅಂಚನ್ ರನ್ನು ಹಿರಿಯ ಕ್ರೀಡಾ ಅಂಕಣಕಾರ ನೆಲೆಯಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಿದರು .

ಸುಮಾರು 30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಇದುವರೆಗೆ ಸುಮಾರು 5000ಕ್ಕೂ ಹೆಚ್ಚು ಕ್ರೀಡಾ ಲೇಖನ/ಅಂಕಣ ಬರಹಗಳನ್ನು ಬರೆದಿದ್ದು, ಇದು ರಾಜ್ಯ, ಅಂತರ್ ರಾಜ್ಯ ಮಟ್ಟದ ವಿವಿಧ ದಿನ ಪತ್ರಿಕೆಗಳಲ್ಲಿ, ವಾರಪತ್ರಿಕೆಗಳಲ್ಲಿ ಹಾಗೂ ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಅಲ್ಲದೆ ಹಲವಾರು ರಾಜ್ಯ , ಅಂತರ್ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳಿಂದ ಅಂಚನ್ ಪುರಸ್ಕೃತರಾಗಿದ್ದಾರೆ.

ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಸಿವಿಲ್ ಹಿರಿಯ ಶ್ರೇಣಿಯ ನ್ಯಾಯಾಧೀಶರಾದ ಎ. ಸೋಮಶೇಖರ, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ. ಎಸ್. ಸಿದ್ಧಲಿಂಗಪ್ಪ, ಚಲನಚಿತ್ರ ನಟಿ ಕು. ಸಿಂಚನಾ ಪಿ. ರಾವ್, ತುಮಕೂರು ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ. ಸಾಗರ್ ಟಿ. ಎಸ್., ಚಲನಚಿತ್ರ ನಿರ್ಮಾಪಕರಾದ ಎಸ್. ಶ್ರೀನಿವಾಸ್, ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಹೆಚ್. ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.