ಶ್ರವಣಬೆಳಗೊಳ : ಜೆಡಿಎಸ್ ಅಭ್ಯರ್ಥಿ ಸಿ.ಎನ್. ಬಾಲಕೃಷ್ಣ ನಾಮಪತ್ರ ಸಲ್ಲಿಕೆ

ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ನಾಮಪತ್ರ ಸಲ್ಲಿಸಿದರು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ಅವರು ಸಹಸ್ರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಮಖಾನ್ ಬಳಿಯ ಕೆಂಪೇಗೌಡ ಸರ್ಕಲ್ ನಿಂದ ಹೊರಟು ಹೊಸ ಬಸ್ ನಿಲ್ದಾಣ, ನವೋದಯ ವೃತ್ತ, ಕೆ.ಆರ್ ಸರ್ಕಲ್ ಮಾರ್ಗವಾಗಿ ರೋಡ್ ಶೋ ಮಾಡುವ ಮೂಲಕ ಆಂಜನೇಯ ದೇವಸ್ಥಾನ ಮುಂಭಾಗ ಆವರಣಕ್ಕೆ ಆಗಮಿಸಿ ಅಲ್ಲಿ ಏರ್ಪಡಿಸಿದ ಜೆಡಿಎಸ್ ಪಕ್ಷದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ ಶಾಸಕ ಸಿ ಎನ್ ಬಾಲಕೃಷ್ಣ ನನ್ನ ಅಧಿಕಾರ ಅವಧಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ರೈತರ ಪರವಾದ ಯೋಜನೆಗಳನ್ನು ರೂಪಿಸುವಲ್ಲಿ ಸಂಪೂರ್ಣವಾಗಿ ಸಫಲನಾಗಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ ಕೆ ಕುಸುಮರಾಣಿ, ಜೆಡಿಎಸ್ ತಾಲೂಕು ಅಧ್ಯಕ್ಷರಾದ ಪರಮ ದೇವರಾಜೇಗೌಡ, ಪುರಸಭೆ ಅಧ್ಯಕ್ಷರಾದ ಶ್ರೀಮತಿ ರೇಖಾವಅನಿಲ್, ಜೆಡಿಎಸ್ ಮುಖಂಡರಾದ ಓಬಳಾಪುರ ಬಸವರಾಜ್, ಮರಗೂರು ಅನಿಲ್, ಆನಂದ್ ಕಾಳೆನಹಳ್ಳಿ, ಎಚ್.ಎನ್.ಲೋಕೇಶ್, ಎಸ್.ಬಿ.ಜಗದೀಶ್, ಸಿ.ಜಿ ಜಗದೀಶ್, ಬಿ.ಆರ್. ಮೊದಲಾದವರು ಹಾಜರಿದ್ದರು.

Related Posts

Leave a Reply

Your email address will not be published.